EducationKannada NewsKarnataka News

*ಗಡಿ ಜಿಲ್ಲೆಯಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಕಳೆದ ಎರಡು ದಿನಗಳಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನ ರಜೆ ಘೋಷಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಲೀಂ ಪಾಷಾ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನಾನೂಕುಲವಾಗುತ್ತಿರುವ ಪ್ರಯುಕ್ತ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಒಂದು ದಿನದ ರಜೆ ಘೋಷಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Related Articles

Back to top button