Belagavi NewsBelgaum NewsKarnataka News
*ಬೆಳಗಾವಿ ಸೇರಿದಂತೆ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ*

ಪ್ರಗತಿವಾಹಿನಿ ಸುದ್ದಿ: ಬಿರು ಬೇಸಿಗೆಗೆ ಕರ್ನಾಟಕ ಕಂಗೆಟ್ಟಿದ್ದು ಸೂರ್ಯನ ಶಾಖ ಮಿತಿಮೀರಿದೆ. ಇದೀಗ ರಾಜ್ಯದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 1 ವಾರದಲ್ಲಿ ರಾಜ್ಯದ ತುಮಕೂರು, ಶಿವಮೊಗ್ಗ ರಾಮನಗರ, ಮೈಸೂರು, ಮಂಡ್ಯ ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿಯಲ್ಲೂ ಮಳೆಯಾಗಲಿದೆ. ಮಾರ್ಚ್ 25ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.
ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಚಾಮರಾಜನಗರದಲ್ಲಿ 19.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಹುತೇಕ ಕಡೆ ಒಣಹವೆ ಮುಂದುವರಿದಿದ್ದು ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಅಂದಾಜಿಸಲಾಗಿದೆ.




