Kannada NewsKarnataka News

ಬಿಮ್ಸ್ ಆಸ್ಪತ್ರೆಯಲ್ಲಿ ಕಳ್ಳತನ ಮಾಡುತ್ತಿದ್ದ ಯುವಕ; ಕೈಚಳಕ ನಡೆಸುತ್ತಿದ್ದಾಗ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಿಬ್ಬಂದಿ, ಸಾರ್ವಜನಿಕರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಕಳ್ಳತನ ನಡೆಸುತ್ತಿದ್ದ ಯುವಕನನ್ನು ಅಲ್ಲಿನ ಸಿಬ್ಬಂದಿ ಹಾಗೂ ರೋಗಿಗಳ ಸಂಬಂಧಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಾರುತಿ ಮಂಗಸೂಳಿ ಬಂಧಿತ ಆರೋಪಿ. ಈತ ಕಳೆದೆರಡು ದಿನಗಳಿಂದ ಬಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿಯ ಹಣ, ಮೊಬೈಲ್ ಇತ್ಯಾದಿ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಮಂಗಳವಾರ ಕೈಚಳಕ ತೋರುತ್ತಿದ್ದಾಗಲೇ ಈತನನ್ನು ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳನ್ನು ಕರೆದುಕೊಂಡು ಬಂದಿದ್ದ ಸಂಬಂಧಿಗಳು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಎಪಿಎಂಸಿ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು ಈತ ಕಳುವು ಮಾಡಿದ್ದ ಎರಡು ಮೊಬೈಲ್ ಗಳು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.

ಯುವಕನಿಗೆ ಹಿಗ್ಗಾ ಮುಗ್ಗಾ ಥಳಿತ; ಮರ್ಮಾಂಗಕ್ಕೆ ಪೆಟ್ರೋಲ್ ಸುರಿದು ಚಿತ್ರಹಿಂಸೆ

Home add -Advt

Related Articles

Back to top button