Belagavi NewsBelgaum NewsKannada NewsKarnataka News
*ನಿಪ್ಪಾಣಿಯಲ್ಲಿ ಭಾರಿ ಮಳೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ವಾಹನಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಪ್ಪಾಣಿಯಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಸಂಗ್ರಹಿಸಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಕಳೆದ ಹಲವು ದಿನಗಳಿಂದ ರಣಬಿಸಿಲಿಗೆ ಬೇಸತ್ತು ಹೋಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಪರಿಣಾಮವಾಗಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ನಿಂತು ರಸ್ತೆಯ ಮೇಲಿನ ನೀರು ಹೋದ ಮೇಲೆ ಯಥಾಸ್ಥಿತಿಯಲ್ಲಿ ಸಂಚಾರ ಪ್ರಾರಂಭಗೊಂಡಿತು.