Latest

ವಿಧಿಯ ಕ್ರೂರ ತಿರುವು…; ಪುನೀತ್ ನಿಧನಕ್ಕೆ ಪ್ರಧಾನಿ ಕಂಬನಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಸ್ಯಾಂಡಲ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಏರ್ ಪೋರ್ಟ್ ಒಂದರಲ್ಲಿ ಪುನೀತ್ ರಾಜ್ ಕುಮಾರ್ ದಂಪತಿಯೊಂದಿಗೆ ನಿಂತಿರುವ ಫೋಟೊ ಶೇರ್ ಮಾಡಿರುವ ಪ್ರಧಾನಿ ಮೋದಿ, ವಿಧಿಯ ಕ್ರೂರ ತಿರುವೊಂದು ಪ್ರತಿಭಾವಂತ ನಟ ಪುನೀತ್ ರಾಜ್ ಕುಮಾರ್ ಅವರನ್ನು ನಮ್ಮಿಂದ ಕಿತ್ತುಕೊಂಡಿದೆ. ಅವರದ್ದು ಸಾಯುವ ವಯಸ್ಸಲ್ಲ ಎಂದು ಕಂಬನಿ ಮಿಡಿದಿದ್ದಾರೆ.

Home add -Advt

ಪುನೀತ್ ಅವರನ್ನು ಮುಂಬರುವ ಪೀಳಿಗೆ ಸದಾ ನೆನಪಿನಲ್ಲಿಟ್ಟುಕೊಂಡಿರುತ್ತೆ. ಅಂಥ ಅದ್ಭುತ ಕೆಲಸಗಳನ್ನು ಅವರು ಮಾಡಿದ್ದಾರೆ. ಪುನೀತ್ ಸಾವಿನ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಸಿಎಂ ಬೊಮ್ಮಾಯಿ ನಾಳಿನ ಕಾರ್ಯಕ್ರಮಗಳು ರದ್ದು

Related Articles

Back to top button