Belagavi NewsBelgaum NewsKannada NewsKarnataka News

*ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಇನ್ನೇನು ಮಳೆಗಾಲ ಮುಗಿಯಿತು ಎನ್ನುವಷ್ಟರಲ್ಲಿ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಮತ್ತೆ ಮಳೆರಾಯ ಅಬ್ಬರಿಸಲಿದ್ದಾನೆ. ಹಲವು ಜಿಲ್ಲೆಯಲ್ಲಿ ಭಾರಿ ಮಳೆ ಆಗಲಿದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಅ. 15ರವರೆಗೆ ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಇತರೆಡೆ ಮಳೆ ಹೆಚ್ಚಾಗಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

 ತುಮಕೂರು, ಶಿವಮೊಗ್ಗ ಮೈಸೂರು, ಮಂಡ್ಯ ಕೊಡಗು, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದೇ 12 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಇದೆ. ಕೊಡಗು, ಹಾಸನ, ಮೈಸೂರು, ಮಂಡ್ಯ ಚಾಮರಾಜನಗರ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆ ಸಾಧ್ಯತೆಯಿದೆ

Related Articles

Back to top button