*ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ*: *4 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಮುಂದಿನ ಎರಡು ದಿನ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದೆ. ನವೆಂಬರ್ 4ರಂದು ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯೊಂದಿಗೆ ಬಿರುಗಾಳಿಯೂ … Continue reading *ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ*: *4 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ*