*ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಬೆನ್ನಲ್ಲೇ ಮಳೆ ಮತ್ತೆ ಚುರುಕಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.  ಅಕ್ಟೋಬರ್ 5ರಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ರಾಜ್ಯದಲ್ಲಿ … Continue reading *ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್*