Belagavi NewsBelgaum NewsKannada NewsKarnataka NewsLatest

*ಜೂ. 14 ರ ವರೆಗೆ ಭಾರಿ ಮಳೆ: ಹಲವು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಜೂನ್ 14 ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ. ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ‘ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಸ್ಥಳಗಳಲ್ಲಿ ಮಾತ್ರ ಹಗುರ ಮಳೆಯಾಗಲಿದೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ ಬೆಂಗಳೂರು, ಮೈಸೂರು, ಮಂಡ್ಯ ರಾಮನಗರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Home add -Advt

ನಾಳೆಯೂ ಸಹ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯಲಿದ್ದು ಹವಾಮಾನ ಇಲಾಖೆ ಜಾಗರೂಕರಾಗಿರಲು ಸೂಚಿಸಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಅಂದಾಜಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದರ ಜೊತೆಗೆ ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಗದಗ, ರಾಯಚೂರು, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೂ ಭಾರಿ ಮಳೆಯ ಅಲರ್ಟ್ ಇರಲಿದೆ. ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಹಾವೇರಿ, ವಿಜಯಪುರ ಸೇರಿದಂತೆ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ.

Related Articles

Back to top button