Belagavi NewsBelgaum NewsKannada NewsKarnataka NewsNationalPolitics

*ಸೆ. 1 ರವರೆಗೆ ಭಾರಿ ಮಳೆ: ಅಲರ್ಟ್ ಘೋಷಿಸಿದ ಹಮಾನ‌ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 30 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಕರಾವಳಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆಗಸ್ಟ್ 29ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲೂ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಆಗಸ್ಟ್ 28 ರಿಂದ ಆಗಸ್ಟ್ 30ರ ವರೆಗೂ ಮೋಡಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 20 ಡಿಗ್ರಿಯಷ್ಟು ಇರುವ ಸಾಧ್ಯತೆ ಇದೆ. ಗಾಳಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸಲಿದೆ.

ಅತ್ತ ಬೆಂಗಳೂರು ಗ್ರಾಮಾಂತರದಲ್ಲಿ ಆಗಸ್ಟ್ 28 ರಿಂದ ಆಗಸ್ಟ್ 30ರ ವರೆಗೂ ಮೋಡಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಲಿದೆ. ಗಾಳಿಯ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

Back to top button