Belagavi NewsBelgaum NewsKannada NewsKarnataka News

*10 ಜಿಲ್ಲೆಗಳಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಸೆಪ್ಟೆಂಬರ್ 22 ರವರೆಗೆ ಕರಾವಳಿ, ಉತ್ತರ, ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, 10 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಮೈಸೂರು, ಮಂಡ್ಯ ಕೊಡಗು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ. ಬೀದ‌ರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹಾಗೆಯೇ,ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜಧಾನಿ ಬೆಂಗಳೂರಲ್ಲಿ ಸೆಪ್ಟೆಂಬರ್ 18 ಗುರುವಾರ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇವತ್ತು ಗುರುವಾರ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರು ಅಷ್ಟೇ ಅಲ್ಲದೆ, ಬೆಂಗಳೂರು ಗ್ರಾಮಾಂತರದಲ್ಲೂ ಉತ್ತಮ ಮಳೆ ಬೀಳಲಿದೆ ಎಂದು ಅಂದಾಜಿಸಲಾಗಿದೆ. ಮುಂದಿನ 24 ಗಂಟೆಗಳವರೆಗೆ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಹಗುರ ಮಳೆಯಾಗುವ ಸಾಧ್ಯತೆ ಇದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button