Belagavi NewsBelgaum NewsKannada NewsKarnataka News

*ಮುಂದುವರೆಯಲಿದೆ ಮಳೆ ಅಬ್ಬರ: ಆರೆಂಜ್,ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ:  ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ದಾವಣಗೆರೆ, ಚಿತ್ರದುರ್ಗ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

Home add -Advt

Related Articles

Back to top button