Belagavi NewsBelgaum NewsKannada NewsKarnataka News

*31ರವರೆಗೂ ಮುಂದುವರಿಯಲಿದೆ ಮಳೆ ಅಬ್ಬರ*

ಪ್ರಗತಿವಾಹಿನಿ ಸುದ್ದಿ : ಬಂಗಾಳಕೊಲ್ಲಿ ಕುಸಿದಿರುವ ವಾಯುಭಾರದಿಂದ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅ. 31ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಳಗಾವಿ, ಧಾರವಾಡ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಹಾಗೂ ಚಾಮರಾಜನಗರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 

ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ ಹಾಸನ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ.

ನಾಳೆ ನಾಡಿದ್ದು ಭಾರಿ ಮಳೆ

ನಾಳೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 6ಕ್ಕೂ ಹೆಚ್ಚು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಆಗಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜನರು ಮಳೆಯ ಮುನ್ನೆಚ್ಚರಿಕೆ ವಹಿಸಬೇಕಿದೆ. 

ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗೂ ಭಾರಿ ಮಳೆಯ ಯೆಲ್ಲೋ ಅಲರ್ಟ್ ಇದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button