Belagavi NewsBelgaum NewsKannada NewsKarnataka NewsNational

*ಇಂದಿನಿಂದ ಉತ್ತರ ಕರ್ನಾಟಕದಲ್ಲಿ ಅಬ್ಬರಿಸಲಿದೆ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಉತ್ತರ ಕರ್ನಾಟಕ ಸೇರಿದಂತೆ ದಕ್ಷಣಿ ಒಳನಾಡಿನಲ್ಲಿ ಸೆ. 16, 17, ಹಾಗೂ 18 ರಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆಪ್ಟೆಂಬರ್ 16, 17ರಂದು ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.

Home add -Advt

ಸೆ. 18ರಂದು ಕರಾವಳಿ ಜಿಲ್ಲೆಗಳು, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

Related Articles

Back to top button