LatestUncategorized

ಚಂಡಮಾರುತ ಭೀತಿ; ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಚಂಡಮಾರುತವಾಗಿ ಮಾರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಕೆಲ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾಂಡಸ್ ಚಂಡಮಾರುತವು ಪಶ್ಚಿಮ ವಾಯುವ್ಯಕ್ಕೆ ಚಲಿಸುತ್ತಿದೆ. ಈ ಹಿನ್ನೆಕೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ. ಕೆಲ ಘಂಟೆಗಳಲ್ಲಿ ಚೆನ್ನೈ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗಲಿದೆ ಎಂದು ತಿಳಿಸಿದೆ.

ತಮಿಳುನಾಡಿನ ಎಗ್ಮೋರ್, ಮೈಲಾಪುರ್, ಪುರಸೈವಾಕಂ, ತಿರುವೋಟಿಯೂರ್, ವೆಲಚೇರಿ, ಮಾಂಬಲಂ, ಪೆರಂಬೂರ್, ಅಂಬತ್ತೂರ್, ಚಂಗಲ್ ಪಟ್ಟು, ಮಧುರವಾಯಲ್, ಸೆಯ್ಯೂರ್ ಪ್ರದೇಶಗಳಲ್ಲಿ ಮಳೆಯಾಗಲಿದೆ.

ಚಂಡಮಾರುತ ತಮಿಳುನಾಡು, ಪುದುಚೆರಿ ಹಾಗೂ ದಕ್ಷಿಣ ಆಂಧ್ರ ಪ್ರದೇಶದ ಕರಾವಳಿಯಿಂದ ನೈಋತ್ಯ ಬಂಗಾಳಕೊಲ್ಲಿಯನ್ನು ತಲುಪಲಿದೆ. ಆಂಧ್ರದ ದಕ್ಷಿಣ ಕರಾವಳಿ, ರಾಯಲಸೀಮಾ ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಗುಜರಾತ್ ನಲ್ಲಿ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ

https://pragati.taskdun.com/gujarathhimachalapradeshaelection-resultvote-counting/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button