ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ 24ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನ ಕರಾವಳಿ ಜಿಲ್ಲೆಗಳು ಸೇರಿದಂತೆ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಪುದುಚೆರಿ, ಕಾರೈಕಲ್, ಕನ್ಯಾಕುಮಾರಿ, ರಾಮನಾಥಪುರಂ,ತೂತುಕುಡಿ,ಶಿವಗಂಗೈ, ಪುದುಕೊಟ್ಟೈ, ನಾಗಪಟ್ಟಣಂ, ಕಡಲೂರು ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಫೆ.4ರಂದು ಗಂಟೆಗೆ 40ರಿಂದ 50 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗಾಳಿಯ ವೇಗ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನೆಲೆಯಲ್ಲಿ ಕರ್ನಾಟಕದ ಹಲವೆಡೆ ಮೋಡಕವಿದ ವಾತಾವರಣವಿರಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ ಬೀಸುತ್ತಿದೆ. ಇನ್ನು ಬೆಂಗಳೂರಿನ ಹಲವೆಡೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ ತಿಳಿಸಿದೆ.
ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಬಹಿರಂಗ ವಿಚಾರಣೆ; ಬಸವಜಯಮೃತ್ಯುಂಜಯ ಸ್ವಾಮೀಜಿ ಪರ ವಾದ ಮಂಡನೆ
https://pragati.taskdun.com/panchamasali-2a-reservation-issuebasavajayamrityunjaya-swamijibelagavidinesh-patil/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ