Kannada NewsKarnataka NewsLatest
*ಮಳೆ ಅಬ್ಬರಕ್ಕೆ ಕುಸಿದು ಬಿದ್ದ ಸರ್ಕಾರಿ ಶಾಲೆಯ ಗೋಡೆ*

ಪ್ರಗತಿವಾಹಿನಿ ಸುದ್ದಿ; ಜೋಯಿಡಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಮಳೆ ಅಬ್ಬರಕ್ಕೆ ಸರ್ಕಾರಿ ಶಾಲೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಜೋಯಿಡಾದಲ್ಲಿ ನಡೆದಿದೆ.
ಜೋಯಿಡಾ ತಾಲೂಕಿನ ಚಾಪೋಲಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಗೋಡೆ ಕುಸಿದಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಶಾಲಾ-ಕಾಲೇಜಿಗೆ ಇಂದು ರಜೆ ಘೋಷಿಸಲಾಗಿತ್ತು. ರಜೆ ನೀಡಿದ ಹಿನ್ನೆಲೆಯಲ್ಲಿ ಭಾರಿ ಅನಾಹುತ ತಪ್ಪಿದೆ.
ಘಟನಾ ಸ್ಥಳಕ್ಕೆ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




