Latest

ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೂರು ದಿನಗಳ ಕಾಲ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Home add -Advt

ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ರಾಯಚೂರು ದಾವಣಗೆರೆ ಕಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಇನ್ನು ಮೂರು ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

Related Articles

Back to top button