ಪ್ರಗತಿವಾಹಿನಿ ಸುದ್ದಿ, ದೆಹಲಿ: ಕರ್ನಾಟಕ ಕರಾವಳಿಯೂ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಜು.20ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಮಧ್ಯಪ್ರದೇಶ, ಕರ್ನಾಟಕ ಕರಾವಳಿ ಗೋವಾ, ಕೇರಳ, ಛತ್ತೀಸ್ ಘಡ, ಆಂಧ್ರಪ್ರದೇಶ ಗುಜರಾತ್, ಮಹಾರಾಷ್ಟ್ರ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಜು.16ರಿಂದ 20ರ ಅವಧಿಯಲ್ಲಿ ಸ್ಥಿರ ಮೋಡಾಚ್ಛಾದಿತ ಭಾರಿ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆ ಹೇಳಿದೆ.
ಇದೇ ವೇಳೆ ಓಡಿಶಾ, ಹಿಮಾಚಲ ಪ್ರದೇಶ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ಭೀಕರ ಪ್ರಮಾಣದ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.
https://pragati.taskdun.com/latest/maharashtraheavy-rainred-alertnasik-flood/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ