Kannada NewsKarnataka NewsLatest

*BREAKING: ಹೇಮರೆಡ್ಡಿ ಮಲ್ಲಮ್ಮ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡೆತ್ ನೋಟ್ ಬರೆದಿತ್ಟು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಹೇಮರೆಡ್ಡಿ ಮಲ್ಲಮ್ಮ ಸಹಕಾರ ಬ್ಯಾಂಕ್ ನಲ್ಲಿ 13 ಕೋಟಿ ಅವ್ಯವಹಾರ ಆರೋಪ ಕೇಳಿಬಂದಿದ್ದು, ಪ್ರತಿಭಟನೆಗಳು, ಧರಣಿ ಹೆಚ್ಚುತ್ತಿದ್ದಂತೆ ಬ್ಯಾಂಕ್ ಅಧ್ಯಕ್ಷ ಬಸನಗೌಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಹೇಮರೆಡ್ಡಿ ಮಲ್ಲಮ್ಮ ಸಹಕಾರ ಬ್ಯಾಂಕ್ ನಲ್ಲಿ 16 ಕೋಟಿ ವ್ಯವಹಾರದಲ್ಲಿ 13 ಕೋಟಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಬ್ಯಾಂಕ್ ಅಧ್ಯಕ್ಷ ಬಸನಗೌಡ 8 ಪುಟಗಳ ಡೆತ್ ನೋಟ್ ಬರೆದಿಟ್ಟು ಶಹಪುರದ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ.

Home add -Advt

ಹಣ ನೀಡುವಂತೆ ಠೇವಣಿದಾರರು ಬ್ಯಾಂಕ್ ಮುಂದೆ ಧರಣಿ ಆರಂಭಿಸುತ್ತಿದ್ದಂತೆಯೇ ಊರು ಬಿಟ್ಟಿದ್ದ ಬಸನಗೌಡ, ನಿನ್ನೆ ರಾತ್ರಿ ಮನೆಗೆ ವಾಪಸ್ ಆಗಿದ್ದರು. ಇಂದು ಬೆಳಿಗ್ಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

Related Articles

Back to top button