Latest

ಜೂನ್ 15ರಂದು ಸಿಇಟಿ ಪರೀಕ್ಷಾ ಫಲಿತಾಂಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ನಾನಾ ವೃತ್ತಿಪರ ಕೋರ್ಸ್ ಗಳಿಗಾಗಿ ಕಳೆದ ಮೇ ತಿಂಗಳಲ್ಲಿ ನಡೆಸಲಾದ ಸಿಇಟಿ ಪರೀಕ್ಷೆ ಫಲಿತಾಂಶ ಜೂನ್ 15ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದೆ. ಇದರೊಂದಿಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನೂ ಆಧರಿಸಿ ರ್ಯಾಂಕ್ ಪಟ್ಟಿ ಸಿದ್ಧಪಡಿಸುವ ಕಾರ್ಯ ಪ್ರಾರಂಭಿಸಲಾಗಿದೆ.

Home add -Advt

ಜೂನ್ 12 ಅಥವಾ 14ರಂದೇ ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿತ್ತಾದರೂ ಕಾರಣಾಂತರಗಳಿಂದ ಜೂನ್ 15ಕ್ಕೆ ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ.

Related Articles

Back to top button