World

*ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಡಾವ್ ಶೋಶಾನಿ ಘೋಷಿಸಿದ್ದಾರೆ.

ಲೆಬನಾನ್ ರಾಜಧಾನಿಯಲ್ಲಿ ಶುಕ್ರವಾರ ನಡೆದ ವೈಮಾನಿಕ ದಾಳಿ ಬಳಿಕ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆಯಾಗಿದೆ ಎಂದು ತಿಳಿದುಬಂದಿದೆ.

ಇಸ್ರೇಲಿಗಳು ಉತ್ತರ ಇಸ್ರೇಲ್ ಗೆ ಗುಂಪಿನಿಂದ ರಾಕೆಟ್ ದಾಳಿ ಬಳಿಕ ಪೂರ್ವ ಹಾಗೂ ದಕ್ಷಿಣ ಲೆಬನಾನ್ ನಲ್ಲಿನ ಹಲವು ಹಿಜ್ಬುಲ್ಲಾ ಸೈಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಇಸ್ರೇಲ್ ಜೆಟ್ ಗಳು ದಕ್ಷಿಣ ಬೈರುತ್ ನಲ್ಲಿ ಹಿಜ್ಬುಲ್ಲಾ ಭದ್ರಕೋಟೆಗಳ ಮೇಲೆ ಬಾಂಬ್ ದಾಳಿ ನಡೆಸಿ ಹಲವು ವಸತಿ ಕಟ್ಟಡಗಳನ್ನು ನೆಲಸಮಗೊಳಿಸಿವೆ.

ಹಸನ್ ನಸ್ರಲ್ಲಾ ಇನ್ಮುಂದೆ ಜಗತ್ತನ್ನು ಭಯಭೀತಗೊಳಿಸಲು ಸಾಧ್ಯವಿಲ್ಲ ಎಂದು ಇಸ್ರೇಲ್ ರಕ್ಷಣಾ ಪಡೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button