ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ಏಕಸ್ ಫೌಂಡೇಶನ್ ನೀಡಿದ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಸುಮಾರು ರೂ 20 ಲಕ್ಷ ವೆಚ್ಚದ 4 HFNC (High Flow Nasal Cannula) ಮಷಿನ್ ಗಳನ್ನು ಬಿಮ್ಸ್ ಗೆ ಹಸ್ತಾಂತರಿಸಲಾಯಿತು.
ಕಾಡಾ ಕಚೇರಿಯಲ್ಲಿ ಇಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಬಿಮ್ಸ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್, ಏಕಸ್ ಫೌಂಡೇಶನ್ ನಿರ್ದೇಶಕ ಡಾ. ಪ್ರವೀಣ್ ಕುಮಾರ್ ನಾಯ್ಕ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಬಸವರಾಜ ಸುಗಂಧಿ, ಏಕಸ್ ಫೌಂಡೇಶನ್ ನ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ