ಪ್ರಗತಿವಾಹಿನಿ ಸುದ್ದಿ: ಕೆಲಸದ ಆಮಿಷವೊಡ್ಡಿ ಯುವತಿಯರನ್ನು ವೇಶ್ಯಾವಾಟಿಕೆ ಅಡ್ಡಿಗೆ ನೂಕುತ್ತಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಕಾಶ್ ಹಾಗೂ ಪಾರಿಜಾತ ಬಂಧಿತ ಆರೋಪಿಗಳು. ಬಂಧಿತ ದಂಪತಿ ಪಟ್ಟೆಗಾರಪಾಳ್ಯ ನಿವಾಸಿಗಳು. ರಾಕೆಶ್ ಹಾಗೂ ಪೂಜಾ ಎಂದು ಹೆಸರು ಬದಲಿಸಿಕೊಂಡು ಈ ದಂಧೆ ನಡೆಸುತ್ತಿದ್ದರು.
ಉತ್ತರ ಕರ್ನಾಟಕ ಭಾಗದ ಯುವತಿಯರನ್ನು ಬೆಂಗಳೂರಿಗೆ ಕರೆತಂದು ಕೆಲಸ ಕೊಡಿಸುವುದಾಗಿ ಹೇಳಿ ಹಣದ ಆಮಿಷವೊಡ್ಡಿ ಬಳಿಕ ಅವರನ್ನು ವೇಶ್ಯಾವಟಿಕೆ ಅಡ್ಡೆಗೆ ನೂಕುತ್ತಿದ್ದರು.
ಬಡ ಹೆಣ್ಣುಮಕ್ಕಳೇ ಇವರ ಟಾರ್ಗೆಟ್ ಆಗಿದ್ದು, ಉತ್ತರ ಕರ್ನಾಟಕ ಭಾಗದ ಹೆಣ್ಣುಮಕ್ಕಳನ್ನು ಬೆಂಗಳೂರಿಗೆ ಕರೆತಂದು ಬಳಿಕ ಕೆಲಸ ಕೊಡಿಸದೇ ವೇಶ್ಯಾವಾಟಿಕೆಗೆ ನೂಕುತ್ತಿದ್ದರು. ತಮಿಳುನಾಡು, ಪಾಂಡಿಚೇರಿ ರೆಸಾರ್ಟ್ ಗಳಲ್ಲಿ ದಂಧೆ ನಡೆಸುತ್ತಿದ್ದರು. ಮದುವೆ ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ವಾರಕ್ಕೊಮ್ಮೆ ಬೆಂಗಳೂರಿನಿಂದ ತಮಿಳುನಾಡಿಗೆ ಯುವತಿಯರನ್ನು ಕರೆದೊಯ್ದು ದಂಧೆ ನಡೆಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ದಂಪತಿಯನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ