*ಇವರಿಗೆ ಹೈಫೈ ಕಾರುಗಳೆ ಟಾರ್ಗೆಟ್; ರಾಜಸ್ಥಾನದಿಂದ ಬಂದು ಬೆಂಗಳೂರಲ್ಲಿ ಖೆಡ್ಡಾಗೆ ಬಿದಿದ್ದೇಗೆ?*
ಪ್ರಗತಿವಾಹಿನಿ ಸುದ್ದಿ: ಸಾಫ್ಟ್ ವೇರ್ ಮೂಲಕ ಕಾರು ಲಾಕ್ ಗಳನ್ನ ಹ್ಯಾಕ್ ಮಾಡಿ ಐಷಾರಾಮಿ ಕಾರುಗಳನ್ನು ಕಳವು ಮಾಡುತ್ತಿದ್ದ ಮೂವರು ಖತರ್ನಾಕ್ ಚೋರರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಖತರ್ನಾಕ್ ಕಾರು ಕಳ್ಳರು ಪೊಲೀಸ್ ಖೆಡ್ಡಾಗೆ ಬಿದ್ದಿದ್ದಾರೆ. ಸಾಫ್ಟ್ ವೇರ್ ಹ್ಯಾಕ್ ಮಾಡಿ ಡೋರ್ ಲಾಕ್ ಓಪನ್ ಮಾಡಿ ಕಾರುಗಳನ್ನ ಕಳ್ಳತನ ಮಾಡುತ್ತಿದ್ದರು ಎಂದು ಗೊತ್ತಾಗಿದೆ. ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಕಳ್ಳರು ಐಷಾರಾಮಿ ಕಾರುಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ತಂತ್ರಜ್ಞಾನದ ಮೂಲಕ ಸಾಫ್ಟ್‌ವೇರ್ ಮೂಲಕ ಹ್ಯಾಕ್ ಮಾಡಿ ಕಾರುಗಳ ಡೋರ್ ಓಪನ್ ಮಾಡುತ್ತಿದ್ದರು. ಇದರಿಂದ ಸುಲಭವಾಗಿ ಕಾರು ಕದ್ದು ಎಸ್ಕೆಪ್ ಆಗುತ್ತಿದ್ದರು.
ಸದ್ಯ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಅನೇಕ ಕಾರುಗಳನ್ನ ಚೋರರು ಇದೇ ಮಾದರಿ ಕಳ್ಳತನ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕಾರು ಕಳವು ಮಾಡಿರುವುದು ಗೊತ್ತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ