
ಪ್ರಗತಿವಾಹಿನಿ ಸುದ್ದಿ: ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಇಂದು ಮುನ್ನೆಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯಾದ್ಯಂತ ಅಂಗನವಾಡಿ ಸೇರಿದಂತೆ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜುಗಳುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದೆ. ಹೀಗಾಗಿ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಇದರ ಜೊತೆಗೆ ನದಿತೀರ, ತಗ್ಗು ಪ್ರದೇಶ, ಬೆಟ್ಟ ಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕೆಂದು ಮನವಿ ಮಾಡಿದ್ದಾರೆ.