Belagavi NewsBelgaum NewsKannada NewsKarnataka News
*ಆ. 2ರವರೆಗೂ 7ಜಿಲ್ಲೆಯಲ್ಲಿ ಹೈ ಅಲರ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆಗಸ್ಟ್ 2ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.



