ಹೊಸ ಮೀಸಲಾತಿಗೆ ಹೈಕೋರ್ಟ್ ತಡೆ; ಸರಕಾರಕ್ಕೆ ಭಾರಿ ಹಿನ್ನಡೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಒಕ್ಕಲಿಗರು ಹಾಗೂ ಪಂಚಮಸಾಲಿಗಳಿಗೆ ಸಮಾಧಾನಪಡಿಸಲು ರಾಜ್ಯ ಸರಕಾರ ಘೋಷಿಸಿದ್ದ ಹೊಸ ಮೀಸಲಾತಿ ನೀತಿಗೆ ಹೈಕೊರ್ಟ್ ತಡೆ ನೀಡಿದರು.

ಒಕ್ಕಲಿಗರಿಗೆ 2 ಸಿ ಹಾಗೂ ಪಂಚಮಸಾಲಿಗಳಿಗೆ 2ಡಿ ಮೀಸಲಾತಿ ನೀಡಲು ಸರಕಾರ ಮುಂದಾಗಿತ್ತು ಆದರೆ ಈ ಸಂಬಂಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಿನ್ನೆಲೆಯಲ್ಲಿ ಸಂಪೂರ್ಣ ವಿಚಾರಣೆಯಾಗುವವರೆಗೆ ಹೊಸ ಮೀಸಲಾತಿ ಘೋಷಣೆ ಮಾಡಬಾರದು ಎಂದು ಕೋರ್ಟ್ ತಿಳಿಸಿದೆ.

ಸಧ್ಯ ಇರುವ ಮೀಸಲಾತಿ ನೀತಿಯನ್ನೇ ಮುಂದುವರಿಸಬೇಕು. ಈ ಬಗ್ಗೆ ಪೂರ್ಣ ವಿಚಾರಣೆ ನಡೆಸಿದ ನಂತರ ಮುಂದಿನ ತೀರ್ಪನ್ನಾಧರಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.

ವಿವರ:

ಪಂಚಮಸಾಲಿಗಳನ್ನು ಒಳಗೊಂಡಂತೆ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳಿಗೆ 2ಸಿ ಮತ್ತು 2ಡಿ ಮೀಸಲು ನೀಡುವ ವಿಚಾರ ಕುರಿತಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ ನೀಡಿದೆ.

ಡಿ.ಜಿ. ರಾಘವೇಂದ್ರ ಮತ್ತಿತರರು ಪಂಚಮಸಾಲಿ ಸಮುದಾಯಕ್ಕೆ 2ಸಿ ಮತ್ತು 2ಡಿ ಮೀಸಲು ನೀಡದಂತೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನ್ಯಾ. ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯಪೀಠ ಗುರುವಾರ ವಿಚಾರಣೆ ನಡೆಸಿತು.

ಈ ಹಿಂದೆ ಅರ್ಜಿ ವಿಚಾರಣೆ ವೇಳೆ ಪಂಚಮಸಾಲಿ ಮೀಸಲಾತಿಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು.

ಗುರುವಾರ ನಡೆದ ವಿಚಾರಣೆ ಅರ್ಜಿದಾರರ ಪರ ವಕೀಲರು, ಸರ್ಕಾರ ತರಾತುರಿಯಲ್ಲಿ ಮೀಸಲಾತಿ ಬಗ್ಗೆ ತೀರ್ಮಾನಿಸುವ ಸಾಧ್ಯತೆ ಇದೆ. ಮೀಸಲಾತಿ ಸಿಗುವುದು ಖಚಿತವೆಂದು ಆಡಳಿತಾರೂಢ ಪಕ್ಷದ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ತುರ್ತಾಗಿ ಅರ್ಜಿಯನ್ನು ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದರು. ಇದನ್ನು ಆಲಿಸಿದ ನ್ಯಾಯಪೀಠ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿತು.

*Breaking News – ಹುಬ್ಬಳ್ಳಿ: ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ವೈಫಲ್ಯ*

https://pragati.taskdun.com/hublipm-modi-road-showsecurity-failure/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button