CrimeKannada NewsKarnataka NewsLatest

*ಜಾಗಿಂಗ್ ಮಾಡುತ್ತಿದ್ದ ಮಹಿಳೆಯ ವಿಡಿಯೋ ಸೆರೆ ಹಿಡಿದು ಸಿಕ್ಕಿ ಬಿದ್ದ ಯುವಕ: ಮುಂದೇನಾಯ್ತು?*

ಪ್ರಗತಿವಾಹಿನಿ ಸುದ್ದಿ: ಮುಂಜಾನೆ ಜಾಗಿಂಗ್‌ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡಿ ಯುವಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಬೆಂಗಳೂರಿನ ಹೆಚ್‌.ಎಸ್‌.ಆರ್‌ ಬಡಾವಣೆಯ ಅರಗ ಕೆರೆ ಬಳಿ ಈ ಘಟನೆ ನಡೆದಿದೆ. ಸರ್ಜಾಪುರದಲ್ಲಿ ವಾಸವಿರುವ ಗೋಲ್ಡನ್ ಕುಮಾರ್ ಎಂಬಾತ ಜಾಗಿಂಗ್ ಮಾಡುತ್ತಿದ್ದ ಮಹಿಳೆಯರ ವಿಡಿಯೋವನ್ನು ಕದ್ದುಮುಚ್ಚಿ ಮಾಡುತ್ತಿದ್ದ.

ಅರಗ ಕೆರೆ ಬಳಿ ಎಂದಿನಂತೆ ಮಹಿಳೆಯೊಬ್ಬರು ಜಾಗಿಂಗ್‌ಗೆ ಬಂದಿದ್ದರು. ಈ ವೇಳೆ ಯುವಕ ಆಕೆಯ ವಿಡಿಯೋ ರೆಕಾರ್ಡ್‌ ಮಾಡುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ. ತಕ್ಷಣ ಮಹಿಳೆ ಯುವಕನ ಕೃತ್ಯದ ಬಗ್ಗೆ ಸ್ಥಳೀಯರಿಗೆ ವಿಚಾರ ತಿಳಿಸಿದ್ದಾಳೆ. ಸ್ಥಳೀಯರು ಯುವಕನ್ನು ತರಾಟೆಗೆ ತೆಗೆದುಕೊಂಡು, ಮೊಬೈಲ್‌ ಪರಿಶೀಲಿಸಿದಾಗ ಹಲವು ಮಹಿಳೆಯರ ವಿಡಿಯೋಗಳು ಇರುವುದು ಬೆಳಕಿಗೆ ಬಂದಿದೆ.

ಮಾಡಿದ ತಪ್ಪಿಗೆ ಯುವಕ ಮಹಿಳೆಯ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾನೆ. ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಯುವಕನ ವಿರುದ್ಧ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button