
ಪ್ರಗತಿವಾಹಿನಿ ಸುದ್ದಿ: ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟಿದ್ದಾರೆ. ತಕ್ಷಣ ಮುಷ್ಕರ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಸಾರಿಗೆ ನೌಕರರ ಸಂಘದ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ತಿಳಿಸಿದ್ದಾರೆ.
ಮುಷ್ಕರ ಮುಂದುವರೆಸಿದರೆ ಎಸ್ಮಾ ಅಡಿ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದು ಹೈಕೋರ್ಟ್ ಸಿಜೆ ವಿಭು ಭಕ್ರು ನ್ಯಾಯಪೀಠ ಸೂಚನೆ ನೀಡಿದೆ. ಎಸ್ಮಾ ಜಾರಿಯಾದರೂ ಮುಷ್ಕರ ನಡೆಸುವುದು ಕಾನೂನು ಬಾಹಿರ. ನಿಮ್ಮ ಮುಷ್ಕರದಿಂದ ಜನರಿಗೆ ತೊಂದರೆಯಾಗಬಾರದು ಎಂದು ಹೈಕೋರ್ಟ್ ತಿಳಿಸಿದೆ. ಅಲ್ಲದೇ ಮುಷ್ಕರಕ್ಕೆ ಇರುವ ತಡೆಯಾಜ್ಞೆಯನ್ನು ಎರಡು ದಿನ ವಿಸ್ತರಿಸಿ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆಯನ್ನು ಆ.೭ಕ್ಕೆ ನಿಗದಿ ಪಡಿಸಿದೆ.
ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾರಿಗೆ ನೌಕರರು ಮುಷ್ಕರ ಹಿಂಪಡೆದಿದ್ದಾರೆ.