
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 2000 ರೂಪಾಯಿ ದಂಡ ವಿಧಿಸಿದೆ. ಅಲ್ಲದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ವಿಚಾರಕ್ಕೆ ಸಂಬಂಧಿಸಿದಾಂತೆ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯಿಸಲು ಪದೇ ಪದೇ ಕಾಲಾವಕಾಶ ಕೋರಿ ವಿಳಂಬ ನೀತಿ ಅನುಸರಿಸಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 2000 ರೂಪಾಯಿ ದಂಡ ವಿಧಿಸಿದೆ.
ಅನುದಾನ ಹಂಚಿಕೆಯಲ್ಲಿ ತಾರತಮ್ಯಎಂದು ಆರೋಪಿಸಿ ಜಮಖಂಡಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸರ್ಕಾಅರಕ್ಕೆ ದಂಡ ವಿಧಿಸಿದೆ.
ಅಕ್ಟೋಬರ್ 29, 2025 ರಿಂದಲೂ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಕಾಲಾವಕಾಶ ಕೇಳುತ್ತಿರುವುದು ಹೈಕೋರ್ಟ್ ಅಸಮಾಧಾನಕ್ಕೆ ಕಾರಣವಾಗಿದೆ. ‘‘ಸುಮಾರು ಒಂದು ವರ್ಷದಿಂದಲೂ ಈ ವಿಳಂಬ ನೀತಿ ಮುಂದುವರಿದಿದೆ’’ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರಕ್ಕೆ ದಂಡ ವಿಧಿಸಿರುವ ಹೈಕೋರ್ಟ್, ಮುಂದಿನ ಎರಡು ವಾರಗಳಲ್ಲಿ ಯಾವುದೇ ವಿಳಂಬವಿಲ್ಲದೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ತಾಕೀತು ಮಾಡಿದೆ.
ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂಪಾಯಿ, ವಿರೋಧ ಪಕ್ಷದ ಶಾಸಕರಿಗೆ 25 ಕೋಟಿ ರೂಪಾಯಿ ಅನುದಾನ ನೀಡಿ ತಾರತಮ್ಯ ಮಾಡಲಾಗಿದೆ ಎಂದು ಪಿಐಎಲ್‌ನಲ್ಲಿ ಆರೋಪಿಸಲಾಗಿತ್ತು. ಅನುದಾನ ಹಂಚಿಕೆಯಲ್ಲಿನ ಸರ್ಕಾರದ ತಾರತಮ್ಯ ನೀತಿಯನ್ನು ಪ್ರಶ್ನಿಸಿದ್ದ ಈ ಅರ್ಜಿಗೆ ಸಮರ್ಪಕ ಪ್ರತಿಕ್ರಿಯೆ ನೀಡುವಲ್ಲಿ ಸರ್ಕಾರ ವಿಫಲವಾಗಿರುವುದಕ್ಕೆ ಹೈಕೋರ್ಟ್ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. ನ್ಯಾಯಾಲಯದ ಆದೇಶ ಪಾಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




