HealthKannada NewsKarnataka NewsLatestLife Style

*ಮಹಿಳಾ ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಹೈಕೋರ್ಟ್ ಮಹಿಳಾ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. 18-52 ವರ್ಷದ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ‘ಋತುಸ್ರಾವ ರಜೆ’ಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಇದು ಸಂವಿಧಾನದ 21ನೇ ವಿಧಿಯಡಿ ಮಹಿಳೆಯರ ಬದುಕುವ ಹಕ್ಕು ಮತ್ತು ಘನತೆಯ ಅವಿಭಾಜ್ಯ ಅಂಗವಾಗಿದೆ. ಸಂಘಟಿತ ಮತ್ತು ಅಸಂಘಟಿತ ವಲಯದ ಎಲ್ಲ ಮಹಿಳೆಯರಿಗೂ ಈ ಸೌಲಭ್ಯ ತಲುಪುವಂತೆ ಹಾಗೂ ‘ಕರ್ನಾಟಕ ಋತುಸ್ರಾವ ರಜೆ ವಿಧೇಯಕ-2025’ ರೂಪಿಸಲು ಆದೇಶಿಸಿದೆ.

Home add -Advt

ರಾಜ್ಯ ಸರ್ಕಾರ ಈ ಹಿಂದೆ ಮಹಿಳೆಯರ ಮುಟ್ಟಿನ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ ಮಹಿಳಾ ಉದ್ಯೋಗಿಗಳಿಗೆ ಮಾಸಿಕ ರಜೆ ನೀಡಲು ಮೀನಾಅಮೇಷ ಎಣಿಸುತ್ತಿದ್ದವು. ಹಾಗಾಗಿ ಇದನ್ನು ಸರಿಯಾದ ರೀತಿಯಲ್ಲಿ ಹಾಗೂ ಕಡ್ಡಾಯವಾಗಿ ಜಾರಿಗೆ ತರುವಂತೆ ಹೈಕೋರ್ಟ್ ಆದೇಶ ನೀಡಿದೆ.

ನೋಂದಾಯಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ 18 ರಿಂದ 52 ವರ್ಷದೊಳಗಿನ ಎಲ್ಲಾ ಮಹಿಳಾ ನೌಕರರಿಗೆ ಈ ರಜೆ ಅನ್ವಯವಾಗುತ್ತದೆ. ಶಾಶ್ವತ, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೂ ಈ ವಿಸ್ತರಣೆ ಮಾಡಬೇಕು ಎಂದು ಹೇಳಿದೆ.ಕೇವಲ ಸಾಫ್ಟ್‌ವೇರ್ ಅಥವಾ ದೊಡ್ಡ ಕಂಪನಿಗಳಲ್ಲದೆ, ಹೋಟೆಲ್ ಕೆಲಸಗಾರರು, ದಿನಗೂಲಿ ನೌಕರರು ಸೇರಿದಂತೆ ಅಸಂಘಟಿತ ವಲಯದ ಮಹಿಳೆಯರಿಗೂ ಈ ಸೌಲಭ್ಯ ತಲುಪುವಂತೆ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರಕ್ಕೆ ಸೂಚಿಸಲಾಗಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಮಹಿಳೆಯರ ಋತುಸ್ರಾವದ ಆರೋಗ್ಯವು ಸಂವಿಧಾನದ 21ನೇ ವಿಧಿಯಡಿ ಬರುವ ‘ಬದುಕುವ ಹಕ್ಕಿನ’ ಅವಿಭಾಜ್ಯ ಅಂಗವಾಗಿದೆ. ಇದು ಕೇವಲ ರಜೆಯಲ್ಲ, ಮಹಿಳೆಯರ ಘನತೆಯ ಪ್ರಶ್ನೆ ಎಂದು ಅಭಿಪ್ರಾಯಪಟ್ಟಿದೆ. ಪ್ರಸ್ತುತ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದರ ಜೊತೆಗೆ, ಈ ಕುರಿತು ಪ್ರಸ್ತಾವಿತ ‘ಕರ್ನಾಟಕ ಋತುಸ್ರಾವ ರಜೆ ಮತ್ತು ನೈರ್ಮಲ್ಯ ವಿಧೇಯಕ-2025’ ಅನ್ನು ಶೀಘ್ರವಾಗಿ ಕಾನೂನಾಗಿ ರೂಪಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ತಿಳಿಸಿದೆ.


Related Articles

Back to top button