
ಪ್ರಗತಿವಾಹಿನಿ ಸುದ್ದಿ: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್ ಸಿ ಎನ್.ರವಿಕುಮಾರ್ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ.
ರವಿಕುಮಾರ್ ವಿರುದ್ಧ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಸಿಎಸ್ ಶಾಲಿನಿ ರಜನೀಶ್ ದೂರು ನೀಡಿಲ್ಲ. ಮೂರನೇ ವ್ಯಕ್ತಿ ದೂರು ಆಧರಿಸಿ ಕೇಸ್ ಹಾಕಲಾಗಿದೆ. ಹೇಳಿಕೆಯಲ್ಲಿ ಅಪರಾಧದ ಅಂಶಗಳಿಲ್ಲ ಎಂದು ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರವಿಕುಮಾರ್ ವಿರುದ್ಧ ತನಿಖೆಗೆ ಮದ್ಯಂತರ ತಡೆ ನೀಡಿ ನ್ಯಾ.ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




