Latest

ವಿಚಾರಣೆಗೆ ಹಾಜರಾಗದ ಅಧಿಕಾರಿಗಳನ್ನು ಬಂಧಿಸಿ ಕರೆತನ್ನಿ; ಹೈಕೋರ್ಟ್ ಖಡಕ್ ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೈಕೋರ್ಟ್ ಸೂಚಿಸಿದರೂ ವಿಚಾರಣೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಕೆಂಡಕಾರಿರುವ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ, ವಿಚಾರಣೆಗೆ ಗೈರಾಗುವ ಅಧಿಕಾರಿಗಳನ್ನು ಬಂಧಿಸಿ ಕರೆತರುವಂತೆ ಸೂಚಿಸಿದ್ದಾರೆ.

ಹೈಕೋರ್ಟ್ ಸೂಚಿಸಿದಾಗ ಅಧಿಕಾರಿಗಳು ವಿಚಾರಣೆಗೆ ಹಾಜರಾಗಬೇಕು. ಸಚಿವ ಸಂಪುಟ ಸಭೆಯಿದ್ದರೂ ನ್ಯಾಯಾಲಯದ ಕಲಾಪ ತಪ್ಪಿಸಿಕೊಳ್ಳುವಂತಿಲ್ಲ. ಇಂಥ ಗೈರು ಹಾಜರಿಯನ್ನು ನಾವು ಸಹಿಸಲ್ಲ. ಇನ್ಮುಂದೆ ವಿಚಾರಣೆಗೆ ಹಾಜರಾಗದ ಅಧಿಕಾರಿಗಳನ್ನು ಬಂಧಿಸಿ ಕರೆತರುವಂತೆ ಡಿಜಿ ಐಜಿಪಿಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಸೂಚಿಸಿದ್ದಾರೆ.

ಹೈಕೋರ್ಟ್ ನ್ನು ರಾಜ್ಯ ಸರ್ಕಾರ ಲಘುವಾಗಿ ಪರಿಗಣಿಸಿದೆ. ಇಂಥ ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಆದೇಶಿಸಲಾಗುವುದು. ಸಂಬಳ ಬರದಂತೆ ತಡೆಹಿಡಿಯಲು ಸೂಚಿಸುವುದಾಗಿ ಎಚ್ಚರಿಸಿದರು.

ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚರಣೆಗೆ ಸಂಬಂಧಿಸಿದಂತೆ ರಾಜ್ಯ ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ನಡೆಯನ್ನು ಖಂಡಿಸಿರುವ ಹೈಕೋರ್ಟ್ , ತರಾಟೆಗೆ ತೆಗೆದುಕೊಂಡಿದೆ.
ಇನ್ಮುಂದೆ ಮುಂಬೈ ಕರ್ನಾಟಕ ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button