Kannada NewsKarnataka NewsLatest

*BREAKING: ಶಿವಶಂಕರಪ್ಪ ಸಾಹುಕಾರ್ ಗೆ ಬಿಗ್ ರಿಲೀಫ್*

ಕೆಪಿಎಸ್​​ಸಿ ಅಧ್ಯಕ್ಷ ಸ್ಥಾನಕ್ಕೆ ಮರುನೇಮಕ ಮಾಡುವಂತೆ ಹೈಕೋರ್ಟ್ ಆದೇಶ

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್​​ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತು ಮಾಡಿದ್ಧ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ.

ತನ್ನನ್ನು ಅಮಾನತು ಮಾಡಿರುವ ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸೂರಜ್ ಗೋವಿಂದರಾವ್ ಅವರಿದ್ದ ಹೈಕೋರ್ಟ್ ಪೀಠ, ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದ ರಾಜ್ಯಪಾಲರ ಆದೇಶ ರದ್ದುಗೊಳಿಸಿದೆ. 7 ದಿನಗಳಲ್ಲಿ ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಅವರನ್ನು ಮರುನೇಮಕ ಮಾಡುವಂತೆ ಮಹತ್ವದ ಆದೇಶ ನೀಡಿದೆ.

ಕೆಪಿಎಸ್​​ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವಂತೆ ಸಚಿವ ಸಂಪುಟ ಸಲಹೆ, ಶಿಫಾರಸು ಮಾಡಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನಷ್ಟೇ ಅನುಸರಿಸಬೇಕು ಎಂದಿರುವ ಕೋರ್ಟ್​​ ಜುಲೈ 10ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದೆ. ಶಿವಶಂಕರಪ್ಪ ಸಾಹುಕಾರ್ ಪುತ್ರಿಯರ ನೇಮಕ ಸಂಬಂಧ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವಂತಿಲ್ಲ. KPSC ಅಧ್ಯಕ್ಷರ ವಿರುದ್ಧದ ಆರೋಪದ ಬಗ್ಗೆ ಕೋರ್ಟ್ ತೀರ್ಮಾನಿಸಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಸ್ಪಷ್ಟನೆಯನ್ನೂ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button