
ಪ್ರಗತಿವಾಹಿನಿ ಸುದ್ದಿ: ಸಾರಿಗೆ ಮುಷ್ಕರ ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯಿತು. ಹೈಕೋರ್ಟ್ ಸಾರಿಗೆ ನೌಕರರ ಮುಷ್ಕರಕ್ಕೆ ಮತ್ತೆ 2 ದಿನ ಬ್ರೇಕ್ ಹಾಕಿ ವಿಚಾರಣೆಯನ್ನು ಆಗಸ್ಟ್ 7 ಕ್ಕೆ ಮುಂದೂಡಿದೆ.
ವಿವಿಧ ಬೇಡಿಕೆ ಇಡೀರಿಸುವಂತೆ ರಾಜ್ಯದ ನಾಲ್ಕು ನಿಗಮಗಳ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮುಷ್ಕರಕಕ್ಕೆ ಹೈಕೋರ್ಟ್ ತಡೆ ನೀಡಿತು ಆದರೂ ಮುಷ್ಕರ್ ಕೈಗೊಳ್ಳಾಗಿತ್ತು. ಹಾಗಾಗಿ ಸಾರಿಗೆ ಮುಷ್ಕರ ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯಿತು.
ಹೈಕೋರ್ಟ್ ನಲ್ಲಿ ವಿಚಾರಣೆ ಮುಂದೂಡಿರು ಹಿನ್ನಲೆಯಲ್ಲಿ ನಾಳೆಯಿಂದ ಎಂದಿನಂತೆ ಸಾರಿಗೆ ಬಸ್ ಸಂಚಾರ ಇರಲಿದೆ. ಸಾರಿಗೆ ಮುಷ್ಕರ ಪ್ರಶ್ನಿಸಿ ಸಲ್ಲಿಸಿದ್ದ PIL ಅನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಿತು.
ಈ ವೇಳೆ ಮುಷ್ಕರದಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂಬುದಾಗಿ ಎಜಿ ಕೋರ್ಟ್ ಗಮನಕ್ಕೆ ತಂದರು. ಇನ್ನೂ ಎಲ್ಲಾ ನಾಲ್ಕು ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದ ಪೀಠ. ಮುಷ್ಕರ ಮುಂದುವರಿಸಿದರೆ ಎಸ್ಮಾ ಅಡಿ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಅವಕಾಶವಿದೆ ಎಂದು ಹೇಳಿದೆ.