ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಉಪಸ್ಥಿತಿಯಲ್ಲಿ ಉನ್ನತಾಧಿಕಾರ ಸಮಿತಿ ಸಭೆ ಮುಂಬೈಯಲ್ಲಿ ಸೋಮವಾರ ಮಧ್ಯಾಹ್ನ 12ಕ್ಕೆ ನಡೆಯಲಿದೆ.
ಸಹ್ಯಾದ್ರಿ ಅತಿಥಿಗೃಹದಲ್ಲಿ ಆಯೋಜನೆಗೊಂಡಿರುವ ಸಭೆಯಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಶರದ್ ಪವಾರ, ಕೇಂದ್ರ ಸಚಿವ ನಾರಾಯಣ ರಾಣೆ, ಉನ್ನತ ತಾಂತ್ರಿಕ ಶಿಕ್ಷಣ ಸಚಿವ ಚಂದ್ರಕಾಂತ ಪಾಟೀಲ, ಕಾರ್ಮಿಕ ಸಚಿವ ಸುರೇಶ ಖಾಡೆ, ಆರೋಗ್ಯ ಸಚಿವ ತಾನಾಜಿ ಸಾವಂತ, ನಿರ್ಮಾಣ ಸಚಿವ ಚವ್ಹಾಣ, ಶಿಕ್ಷಣ ಸಚಿವ ದೀಪಕ ಕೋಮರಕರ, ತೆರಿಗೆ ಸಚಿವ ಶಂಭುರಾಜ ದೇಸಾಯಿ ಸೇರಿದಂತೆ ಹಲವು ಸಚಿವರು ಹಾಜರಿರುವರು. ಎಂದು ಮೂಲಗಳು ತಿಳಿಸಿವೆ.
ನ.23ರಂದು ಸುಪ್ರೀಂ ಕೋರ್ಟ್ ನಲ್ಲಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ತನ್ನ ವಾದವನ್ನು ಪ್ರಬಲಗೊಳಿಸಿಕೊಳ್ಳುವ ಕ್ರಮವಾಗಿ ಮಹಾರಾಷ್ಟ್ರ ಈ ಕ್ರಮಕ್ಕೆ ಮುಂದಾಗಿದೆ.
ಇತ್ತೀಚೆಗಷ್ಟೇ ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರು ಗಡಿ ವಿಷಯ ಕುರಿತು ಸಭೆಯೊಂದನ್ನು ಆಯೋಜಿಸುವಂತೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಸಭೆ ಆಯೋಜನೆಗೆ ಸೂಚಿಸಿದ್ದರು.
ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ; ಮೂವರು ವಿದ್ಯಾರ್ಥಿಗಳ ವಿರುದ್ಧ FIR
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ