ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆ ಅತಿ ಕಡಿಮೆ ಅಂಕದ ಮೂಲಕ ಕೊನೇ ಸ್ಥಾನಕ್ಕೆ ಕುಸಿದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಗರಿಮಾ ಪ್ರೌಢಶಾಲಾ ಶಿಕ್ಷಕರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ಯಾದಗಿರಿ ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರ ವಾರ್ಷಿಕ ಬಡ್ತಿ ಸೇರಿದಂತೆ ಇನ್ನಿತರ ಸೌಲಭ್ಯಗಳಿಗೆ ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ಕೆಲಸ ಮಾಡುವ ವಿಷಯವಾರು ಶಿಕ್ಷಕರಿಗೆ ಒಂದು ವಾರ್ಷಿಕ ಬಡ್ತಿಗೆ ತಡೆ ನೀಡಿ ಸಿಇಒ ಗರಿಮಾ ಆದೇಶ ಹೊರಡಿಸಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಾಯದಿಗಿ ಜಿಲ್ಲೆ ಕೊನೇ ಸ್ಥಾನಕ್ಕೆ ಕುಸಿದ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿಯೂ ಸಿಎಂ ಸಿದ್ದರಾಮಯ್ಯ ಜಿಲ್ಲಾ ಶಿಕ್ಷಣಾಧಿಕಾರಿಗಳು, ತಾಲೂಕು ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೇ ಶಿಕ್ಷಕರ ವಿರುದ್ಧವೂ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ