Kannada NewsKarnataka News

ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿದ ಶಾಸಕ ಗಣೇಶ ಹುಕ್ಕೇರಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ -ಚಿಕ್ಕೋಡಿ -ಸದಲಗಾ ಮತ ಕ್ಷೇತ್ರದ ಚಂದೂರ್ ಗ್ರಾಮದಲ್ಲಿ ಎಸ್ ಸಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ ನೀಡಿದರು.
55 ಲಕ್ಷ ರೂ. ವೆಚ್ಚದಲ್ಲಿ ಗ್ರಾಮದ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ. ಸಂಪೂರ್ಣ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ನಿರಂತರವಾಗಿ ನಡೆಯುತ್ತಿದ್ದು, ಜನರ ಸಹಕಾರವೇ ಇದಕ್ಕೆ ಕಾರಣ ಎಂದು ಗಣೇಶ ಹುಕ್ಕೇರಿ ಈ ಸಂದರ್ಭದಲ್ಲಿ ಹೇಳಿದರು.
ಕಳೆದ 2 ದಶಕಗಳಿಗೂ ಹೆಚ್ಚಿನ ಅವಧಿಯಿಂದ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಡೊಯ್ಯಲಾಗುತ್ತಿದೆ. ಇಡೀ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ. ಜನರ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಹಿರಿಯರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

Back to top button