EducationKannada NewsKarnataka NewsLatestPolitics

*ಬಿ.ಎಡ್ ವಿದ್ಯಾರ್ಥಿಗಳಿಗೆ ಶಾಕ್ ನೀಡಿದ ಉನ್ನತ ಶಿಕ್ಷಣ ಸಚಿವ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಿ.ಎಡ್ (B.ed) ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕ‌ರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಮಧು ಜಿ ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಕ್ರಮ ತೆಗೆದುಕೊಳ್ಳುತ್ತೇವೆ. ಅನೇಕ ವರ್ಷಗಳಿಂದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಿಲ್ಲ. ಬೇರೆ ಬೇರೆ ರಾಜ್ಯದಲ್ಲಿ ಬಿ.ಎಡ್‌ ಕಾಲೇಜುಗಳ ಶುಲ್ಕ ಜಾಸ್ತಿ ಇದೆ. ಹೀಗಾಗಿ ರಾಜ್ಯದಲ್ಲೂ ಶುಲ್ಕ ಪರಿಷ್ಕರಣೆಗೆ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

ಶುಲ್ಕ ಪರಿಷ್ಕರಣೆ ಸಂಬಂಧ ಉನ್ನತ ಶಿಕ್ಷಣ ಇಲಾಖೆ 6 ಸದಸ್ಯರನ್ನೊಳಗೊಂಡ ಸಮಿತಿ ರಚನೆ ಮಾಡಲಾಗಿದೆ. ವರದಿ ಬಂದ ಕೂಡಲೇ ಬಿ.ಎಡ್ ಕಾಲೇಜುಗಳ ಪರಿಷ್ಕರಣೆ ಮಾಡುತ್ತೇವೆ. ಈ ಶೈಕ್ಷಣಿಕ ವರ್ಷವೇ ಶುಲ್ಕ ಪರಿಷ್ಕರಣೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Home add -Advt

Related Articles

Back to top button