Kannada NewsKarnataka NewsLatest
ಯಾವ ಕ್ಷೇತ್ರದಲ್ಲಿ ಹೆಚ್ಚು, ಯಾವ ಕ್ಷೇತ್ರದಲ್ಲಿ ಕಡಿಮೆ ಮತದಾರರು; ಸಮಗ್ರ ಮಾಹಿತಿ ಇಲ್ಲಿದೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾವು ಏರುತ್ತಿದೆ. ಹಾಗೆಯೇ ಚುನಾವಣೆ ಕರ್ತವ್ಯದಲ್ಲಿ ತೊಡಗಿರುವ ಅಧಿಕಾರಿಗಳು ಸಹ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳತೊಡಗಿದ್ದಾರೆ.
ಕ್ಷೇತ್ರದ ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ. ಅದರಂತ ಗೋಕಾಕ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 2,49,993 ಮತದಾರರಿದ್ದರೆ, ಬೈಲಹೊಂಗಲದಲ್ಲಿ ಅತಿ ಕಡಿಮೆ ಎಂದರೆ 1,89,858 ಮತದಾರರಿದ್ದಾರೆ.
ಈ ಬಾರಿ ಒಟ್ಟೂ 18,13,538 ಜನರು ಮತದಾನದ ಹಕ್ಕು ಹೊಂದಿದ್ದಾರೆ. 911025 ಪುರುಷರು ಹಾಗೂ 902455 ಮಹಿಳಾ ಮತದಾರರು.
ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ – Press Note 05.04.2021
ಬೆಳಗಾವಿ ಲೋಕಸಭಾ ಉಪಚುನಾವಣೆ: ಕಣದಲ್ಲಿ 10 ಅಭ್ಯರ್ಥಿಗಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ