Kannada NewsKarnataka NewsLatest

*ಸಿಎಂ ಕಚೇರಿ ಸೂಚನೆ ಬೆನ್ನಲ್ಲೇ ಎಚ್ಚತ್ತ ಅಧಿಕಾರಿಗಳು: ಪಾಳುಬಿದ್ದ ಹೆದ್ದಾರಿ ತಂಗುದಾಣಗಳು ಸ್ವಚ್ಛ, ಸಾರ್ವಜನಿಕರ ಬಳಕೆಗೆ ಮುಕ್ತ*

ಪ್ರಗತಿವಾಹಿನಿ ಸುದ್ದಿ: ಪಾಳುಬಿದ್ದ ಹೆದ್ದಾರಿ ತಂಗುದಾಣಗಳನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ಬೆನ್ನಲ್ಲೇ ಸ್ವಚ್ಛಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿದೆ.

ಬೆಂಗಳೂರು-ಮೈಸೂರು ಹಳೆ ಹೆದ್ದಾರಿಯ ಕುಂಬಾಪುರ ಕಾಲೋನಿ, ಬಸವಾಪುರ ಹಾಗೂ ವಡೇರಹಳ್ಳಿ ಭಾಗದ ಬಸ್ ತಂಗುದಾಣಗಳು ಪಾಳುಬಿದ್ದು, ಪ್ರಯಣಿಕರು ಪರದಾಡುತ್ತಿರುವ ಬಗ್ಗೆ ವರದಿಯಾಗಿತ್ತು. ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸಿಎಂ ಡಿ.ಕೆ.ಶಿವಕುಮಾರ್ ಕಚೇರಿ, ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಿತ್ತು.

ಸಿಎಂ ಕಚೇರಿಯ ಆದೇಶದ ಬೆನ್ನಲ್ಲೇ ಸ್ಥಳೀಯ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಕಸ-ಕಡ್ಡಿ, ಗಿಡಗಂಟಿಗಳನ್ನು ತೆರವುಗೊಳಿಸಿ, ತಂಗುದಾಣಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button