ಕರ್ನಾಟಕ ಹಿಜಾಬ್ ನಿಷೇಧ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಭಜಿತ ತೀರ್ಪು; ಮುಖ್ಯ ನ್ಯಾಯಮೂರ್ತಿ ಪೀಠಕ್ಕೆ ಪ್ರಕರಣ ವರ್ಗಾವಣೆ

ಹಿಜಾಬ್ ಪ್ರಕರಣ : ಮುಖ್ಯ ನ್ಯಾಯಮೂರ್ತಿ ಪೀಠಕ್ಕೆ ಪ್ರಕರಣ ವರ್ಗಾವಣೆ
ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: “ಅಭಿಪ್ರಾಯದಲ್ಲಿ ಭಿನ್ನಾಭಿಪ್ರಾಯವಿದೆ” ಎಂದು ನ್ಯಾಯಾಧೀಶರಲ್ಲಿ ಒಬ್ಬರು ಹೇಳಿದ್ದರಿಂದ ಕರ್ನಾಟಕ ಹಿಜಾಬ್ ನಿಷೇಧ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಭಜಿತ ತೀರ್ಪು ನೀಡಿದೆ.
ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ವಜಾಗೊಳಿಸಿದರಲ್ಲದೆ, ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದರು.
ಆದರೆ ಇದೇ ವೇಳೆ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು “ಹಿಜಾಬ್ ಧರಿಸುವುದು ಆಯ್ಕೆಯ ವಿಷಯ” ಎಂದು ಹೇಳಿದರು.
ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಪೀಠಕ್ಕೆ ವರ್ಗಾಯಿಸಲಾಗಿದೆ. ವಿಚಾರಣೆಯನ್ನು ತ್ರಿ ಸದಸ್ಯ ಪೀಠಕ್ಕೆ ವರ್ಗಾಯಿಸುವ ಸಾಧ್ಯತೆ ಇದೆ.
ಮಹಾಕುಂಭ ಮೇಳಕ್ಕೆ ಹುಕ್ಕೇರಿ ಶ್ರೀಗಳಿಗೆ ಆಹ್ವಾನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




