Latest

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಶಿಕ್ಷಕನ ಮೇಲೆ ರಾಡ್ ನಿಂದ ಹಲ್ಲೆ

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ತಾರಕಕ್ಕೇರಿದ್ದು, ರಸ್ತೆ ದಾಟುತ್ತಿದ್ದ ಶಿಕ್ಷಕರೊಬ್ಬರ ತಲೆಗೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ.

ಗಾಯಾಳು ಶಿಕ್ಷಕ ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲದ ಮಂಜುನಾಥ್ ನಾಯಕ್ ಎಂದು ತಿಳಿದುಬಂದಿದೆ. ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರವಾಗಿ ರಬಕವಿ ಬನಹಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೆಲ ವಿದ್ಯಾರ್ಥಿಗಳು ಕಾಲೇಜಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಕಾಲೇಜು ಬಳಿ ರಸ್ತೆ ದಾಟುತ್ತಿದ್ದ ಶಿಕ್ಷಕ ಮಂಜುನಾಥ್ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದ್ದು, ಶಿಕ್ಷಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಶಿಕ್ಷಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ನಡುವೆ ಕಲ್ಲು ತೂರಾಟ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಾಲ್ವರನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಜಾಬ್ ವಿವಾದ; ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button