Latest

ನ್ಯಾಯಾಧೀಶರಿಗೆ ಬೆದರಿಕೆ ಕರೆ; ಮತ್ತೋರ್ವ ಆರೋಪಿ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಧಾನಸೌಧ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಜಮಾಲ್ ಮಹಮ್ಮದ್ ಉಸ್ಮಾನಿಯ ಬಂಧಿತ ಆರೋಪಿ. ಆರೋಪಿಯನ್ನು ಈಗಾಗಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿರುವ ಪೊಲೀಸರು 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.

ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಈಗಾಗಲೇ ಕೋವೈ ರೆಹಮತ್ ಉಲ್ಲಾನನ್ನು ಪೊಲೀಸರು ಬಂಧಿಸಿದ್ದರು. ಇಬ್ಬರೂ ತಮಿಳುನಾಡಿನ ತೌಹೀದ್ ಜಮಾತ್ ನ ಸದಸ್ಯರು ಎಂದು ತಿಳಿದುಬಂದಿದೆ.

ಸಿಎಂ ಬೊಮ್ಮಾಯಿ – ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button