Kannada NewsLatest

ಹಿಜಾಬ್ ಸಂಘರ್ಷ; ವಿಜಯಾ ಪ್ಯಾರಾ ಮೆಡಿಕಲ್ ಕಾಲೇಜಿಗೆ ರಜೆ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹಿಜಾಬ್ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಬೆಳಗಾವಿ ವಿಜಯಾ ಪ್ಯಾರಾ ಮೆಡಿಕಲ್ ಕಾಲೇಜಿಗೆ ಇದೀಗ ರಜೆ ಘೋಷಣೆ ಮಾಡಲಾಗಿದೆ.

ಕಳೆದ ಮೂರು ದಿನಗಳಿಂದ ಕಾಲೇಜಿನಲ್ಲಿ ಹಿಜಾಬ್ ಸಂಘರ್ಷ ಮುಂದುವರೆದಿತ್ತು. ಇಂದು ಕೂಡ 12 ವಿದ್ಯಾರ್ಥಿನಿಯರು ಹಿಜಾಬ್ ಹಾಗೂ ಬುರ್ಖಾ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಅವರೊಂದಿಗೆ ಪೋಷಕರು ಕೂಡ ಆಗಮಿಸಿದ್ದರು. ಈ ವೇಳೆ ಸಿಬ್ಬಂದಿಗಳು ತಡೆದಿದ್ದಾರೆ. ಹಿಜಾಬ್ ಧರಿಸಿ ತರಗತಿಗೆ ಹೋಗಲು ಅವಕಾಶ ನಿಡಬೇಕು ಎಂದು ಕಾಲೇಜು ಎದುರು ವಿದ್ಯಾರ್ಥಿನಿಯರು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

Home add -Advt

ಹಿಜಾಬ್ ತೆಗೆದು ಬಂದರೆ ತರಗತಿಗಳಿಗೆ ಅವಕಾಶ ನೀಡುವುದಾಗಿ ಪ್ರಾಂಶುಪಾಲರು ಮನವಿ ಮಾಡಿದ್ದಾರೆ. ಆದರೆ ಪಟ್ಟು ಬಿಡದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿಜಯಾ ಪ್ಯಾರಾ ಮೆಡಿಕಲ್ ಕಾಲೇಜಿಗೆ ಪ್ರಾಂಶುಪಾಲರು ರಜೆ ಘೋಷಿಸಿದ್ದಾರೆ.
58 ವಿದ್ಯಾರ್ಥಿನಿಯರು ಸಸ್ಪೆಂಡ್

Related Articles

Back to top button