Latest

ಸಂವಿಧಾನ ಧರ್ಮಕ್ಕಿಂತ ದೊಡ್ದದು ಎಂದ ಬಿಎಸ್ ವೈ; ಹೈಕೋರ್ಟ್ ತೀರ್ಪು ವಿಶ್ವಕ್ಕೆ ಮಾದರಿ ಎಂದ ಈಶ್ವರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಹಿಜಾಬ್ ವಿವಾದ ಕುರಿತು ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ. ತೀರ್ಪನ್ನು ಎಲ್ಲರೂ ಗೌರವಿಸಿ ಪಾಲಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಮತ್ತೆ ವಿವಾದ ಮಾಡಲು ಹೋಗಬಾರದು. ಸಂವಿಧಾನ ಧರ್ಮಕ್ಕಿಂತ ದೊಡ್ಡದು ಎಂಬುದು ಹೈಕೋರ್ಟ್ ತೀರ್ಪಿನಿಂದ ಸಾಬೀತಾಗಿದೆ ಎಂದು ಹೇಳಿದರು.

Home add -Advt

ಇದೇ ವೇಳೆ ಹೈಕೋರ್ಟ್ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಹಿಜಾಬ್ ಅರ್ಜಿ ವಜಾಗೊಳಿಸಿದೆ. ಹೈಕೋರ್ಟ್ ತೀರ್ಪು ಇಡೀ ವಿಶ್ವಕ್ಕೆ ಮಾದರಿ. ರಾಜ್ಯದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಗೂ ಅವಕಾಶವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಾಗಲಿ ಅಥವ ರಾಜ್ಯದ ಯಾವುದೇ ಭಾಗದಲ್ಲಾಗಲಿ ಯಾವುದೇ ರೀತಿ ಗೊಂದಲ, ಅಹಿತಕರ ಘಟನೆ ಮತ್ತೆ ನಡೆಯಲು ಅವಕಾಶವಿಲ್ಲ. ಕೋರ್ಟ್ ತೀರ್ಪನ್ನು ಎಲ್ಲರೂ ಶಾಂತ ಚಿತ್ತದಿಂದ ಪಾಲನೆ ಮಾಡಬೇಕು. ಗೊಂದಲ ಸೃಷ್ಟಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದೆಲ್ಲದಕ್ಕೂ ಕಾಂಗ್ರೆಸ್ ನೇರ ಕಾರಣ; ಮತ್ತೆ ಗುಡುಗಿದ ಬಿಜೆಪಿ

Related Articles

Back to top button