ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ಎಲ್ಲರೂ ಕೋರ್ಟ್ ತೀರ್ಪನ್ನು ಪಾಲಿಸಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು. ಈ ಕುರಿತು ಎಲ್ಲಾ ಸಮುದಾಯದ ಮುಖಂಡರು, ಪೋಷಕರು, ಶಿಕ್ಷಕರು, ರಾಜಕಾರಣಿಗಳು, ವಿದ್ಯಾರ್ಥಿಗಳು ಎಲ್ಲರಲ್ಲಿಯೂ ಕಳಕಳಿಯ ಮನವಿ ಮಾಡುತ್ತೇನೆ. ಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಿ. ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಗಮನಹರಿಸಿ ಎಂದು ಹೇಳಿದರು.
ವಿದ್ಯೆಗಿಂತ ಹೆಚ್ಚಿನದ್ದು ಯಾವುದೂ ಇಲ್ಲ. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ, ಭವಿಷ್ಯದ ಬಗ್ಗೆ ಚಿಂತನೆ ಮಾಡಬೇಕು. ಬೇರಾವ ಅನಗತ್ಯ ವಿಚಾರಗಳು ಬೇಡ. ಎಲ್ಲಾ ವಿದ್ಯಾರ್ಥಿಗಳು ಹೈಕೋರ್ಟ್ ತೀರ್ಪು ಪಾಲಿಸಿ ಎಂದು ತಿಳಿಸಿದರು.
ಈಗಾಗಲೇ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಭದ್ರತೆ ಕೈಗೊಳ್ಳಲಾಗಿದೆ. ಯಾರೇ ಕಾನೂನು ಕೈಗೆತ್ತಿಕೊಂಡರೂ ಕ್ರಮ ಕೈಗೊಳ್ಳಲಾಗುವುದು. ಗೃಹ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದರು.
ಹಿಜಾಬ್ ವಿವಾದ; ಎಲ್ಲಾ ರಿಟ್ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್; ಮಹತ್ವದ ತೀರ್ಪು ಪ್ರಕಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ