ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಒಡ್ಡಾಲಾಗಿದೆ. ಈ ಹಿನ್ನೆಲೆಯಲ್ಲಿ ಬೆದರಿಕೆಯೊಡ್ಡಿದವರ ವಿರುದ್ಧ ಕ್ರಮಕ್ಕೆ ಕೋರಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಗೆ ಅರ್ಜಿ ಸಲ್ಲಿಸಲಾಗಿದೆ.
ತಮಿಳುನಾಡಿನ ತೌಹೀದ್ ಜಮಾತ್ ಸಂಘಟನೆ ಹೈಕೋರ್ಟ್ ನ ಮೂವರು ನ್ಯಾಯಮೂರ್ತಿಗಳಿಗೆ ಬೆದರಿಕೆಯೊಡ್ಡಿದೆ ಎಂದು ತಿಳಿದುಬಂದಿದೆ. ಸಂಘಟನೆಯ ರೆಹಮತುಲ್ಲಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಗಿರೀಶ್ ಭಾರದ್ವಾಜ್ ಎಂಬುವವರು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಗೆ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಮನವಿ ಮಾಡಲಾಗಿದೆ. ಈ ನಡುವೆ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪಿಎಫ್ ಐ ಹಾಗೂ ನಟ ಚೇತನ್ ವಿರುದ್ಧವೂ ಕ್ರಮಕ್ಕೆ ಮನವಿ ಮಾಡಲಾಗಿದೆ.
ಪಠ್ಯಕ್ರಮದಲ್ಲಿ ಭಗವದ್ಗೀತೆ ನಮ್ಮ ಧ್ಯೇಯ; ಸಿಎಂ ಬೊಮ್ಮಾಯಿ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ