
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ತ್ರಿಸದಸ್ಯಪೀಠ, ಮುಂದಿನ ಆದೇಶದವರೆಗೆ ಯಾವುದೇ ಧಾರ್ಮಿಕ ಗುರುತು ಬಳಸುವಂತಿಲ್ಲ ಎಂದು ಮಧ್ಯಂತರ ಆದೇಶ ಹೊರಡಿಸಿದೆ.
ಹಿಜಾಬ್ ವಿವಾದ ಕುರಿತು ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರನ್ನೊಳಗೊಂಡ ತ್ರಿಸದಸ್ಯ ಪೂರ್ಣಪೀಠದಲ್ಲಿ ವಿಚಾರಣೆ ನಡೆದಿದ್ದು, ಮಧ್ಯಂತರ ಆದೇಶ ಹೊರಡಿಸುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಸಿಜೆ, ಇದೀಗ ಮಧ್ಯಂತರ ಆದೇಶ ನೀಡಿದ್ದು, ಅರ್ಜಿವಿಚಾರಣೆ ಸೋಮವಾರಕ್ಕೆ ಮುಂದೂಡಿದ್ದಾರೆ.
ಅರ್ಜಿ ವಿಚಾರಣೆ ಮುಂದುವರೆಯಲಿದೆ. ಆದರೆ ಸಧ್ಯಕ್ಕೆ ಮಧ್ಯಂತರ ಆದೇಶ ನೀಡಲಾಗುವುದು. ನ್ಯಾಯಾಲಯದ ಮುಂದಿನ ಆದೇಶದವರೆಗೆ ಶಾಲಾ-ಕಾಲೇಜಿಗೆ ಹಿಜಾಬ್ ಆಗಲಿ ಕೇಸರಿ, ನೀಲಿ ಶಾಲುಗಳನ್ನಾಗಲಿ ಧರಿಸಿ ಹೋಗುವಂತಿಲ್ಲ. ಸಮವಸ್ತ್ರ ಮಾತ್ರ ಧರಿಸಬೇಕು, ಹೈಸ್ಕೂಲು, ಕಾಲೇಜುಗಳನ್ನು ಶೀಘ್ರವೇ ಆರಂಭಿಸಬೇಕು ಎಂದು ಆದೇಶ ನೀಡಿದ್ದಾರೆ.
ಅಲ್ಲದೇ ಅರ್ಜಿ ವಿಚಾರಣೆಯನ್ನು ಸೋಮವಾರ ಮಧ್ಯಾಹ್ನ 2:30ಕ್ಕೆ ಮುಂದೂಡಲಾಗಿದೆ.
ಹಿಜಾಬ್ V/Sಕೇಸರಿ ಶಾಲು ವಿವಾದ; ದೇವರ ಮೊರೆಹೋದ ಭಕ್ತ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ